“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!



(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.







ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.






 

error: Content is protected !!
Scroll to Top