ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!



(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.







ಆರೋಪಿಯನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು,  ಸ್ಥಳದಲ್ಲಿದ್ದ ಜನರು ಆತಂಕಕ್ಕೊಳಗಾಗುವಂತೆ ಮಾಡಿತ್ತು ಎನ್ನಲಾಗಿದೆ.






error: Content is protected !!
Scroll to Top