ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣದಲ್ಲಿ ಹಣವನ್ನು ಅವರು ವಶಪಡಿಸಿಕೊಂಡರು, ಆದರೆ ಅವರು ಅದನ್ನು ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತೆ ಕೇಸ್ ದಾಖಲಿಸಿದ್ದರು.

ನನ್ನ ವಿರುದ್ಧ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಶಂಕರ ನಾಯಕ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ. ಹೀಗಾಗಿ, ಪ್ರಕರಣದ ತನಿಖೆ ನಡೆಯಬೇಕು ಎಂದು ಆದೇಶದಲ್ಲಿ ವಿವರಿಸಿದೆ.

Also Read  ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

 

 

error: Content is protected !!
Scroll to Top