ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 16.  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದೆ.

ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ‌ಲಭ್ಯವಾಗಿಲ್ಲ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Also Read  ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ

 

 

error: Content is protected !!
Scroll to Top