’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                 

(ನ್ಯೂಸ್ ಕಡಬ) newskadaba.c0m ಪಡುಬಿದ್ರಿ, ಆ. 16.  ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.

ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ, ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.ಕೊಟ್ಟ ಮಾತಿನಂತೆ ನಡೆದ ಫಲವಾಗಿ ಇಂದು ನೌಕರರು ನೆಮ್ಮದಿಯಿಂದ ಇದ್ದಾರೆ. ಟೋಲ್ ಗೇಟ್ ವಿಚಾರದಲ್ಲಿ ಜನರ ಪರವಾಗಿ ನಿಲ್ಲುತ್ತೇನೆ ಎಂದು ಸಚಿವರು ತಿಳಿಸಿದರು.

Also Read  ರಾಮಕುಂಜ: ಅಕ್ರಮ ಮರ ಸಾಗಾಟ ಪತ್ತೆ ► ಪಿಕಪ್ ಸಹಿತ ಮರ ವಶಕ್ಕೆ, ಇಬ್ಬರು ಪರಾರಿ

 

 

error: Content is protected !!
Scroll to Top