(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16. ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ.
ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.