ವಿದ್ಯುತ್ ಅವಘಡ- ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ. 16. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿದ ಪರಿಣಾಮ ದಂಪತಿಗಳಿಬ್ಬರು ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ದಂಪತಿಗಳನ್ನು ಲತಾ ಹಾಗೂ ನಾಗರಾಜ್ ಎಂದು ಗುರುತಿಸಲಾಗಿದೆ. ರೈತರಾಗಿದ್ದ ದಂಪತಿ ಎಂದಿನಂತೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಾ ಪಕ್ಕದಲ್ಲೇ ಇದ್ದ ಟ್ರಾನ್ಸ್‌ಫಾರ್ಮರ್ ಬಳಿ ತೆರಳಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Scroll to Top