ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 16. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಒಟ್ಟು 819 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01ರ ಒಳಗೆ ಅರ್ಜಿ ಸಲ್ಲಿಸಬೇಕಿದೆ.

ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಯ್ಕೆ ಆದವರು ತಿಂಗಳಿಗೆ 69,100 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಒಟ್ಟು ಹುದ್ದೆಗಳಲ್ಲಿ 122 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ 697 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಯಸ್ಸಿನ ಅರ್ಹತೆ
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Also Read  ಕಾರು-ಲಾರಿ ಮುಖಾಮುಖಿ ಢಿಕ್ಕಿ ➤ಸ್ಥಳದಲ್ಲೇ ಇಬ್ಬರ ಮೃತ್ಯು

ಅರ್ಜಿ ಶುಲ್ಕ ಎಷ್ಟು?

ಮಹಿಳೆಯರು, ಎಸ್‌ಸಿ, ಎಸ್‌ಟಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ 100 ರೂ.ಗಳನ್ನು ಪಾವತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಮೊದಲು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ನಡೆಸಲಾಗುತ್ತದೆ. ನಂತರ ದೈಹಿಕ ಗುಣಮಟ್ಟದ ಪರೀಕ್ಷೆ (PST) ನಡೆಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆ ಆದರೆ ಡಾಕ್ಯುಮೆಂಟ್ ಪರಿಶೀಲನೆ ಮಾಡಲಾಗುತ್ತದೆ. ಈ ಹಂತದ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-09-2024 ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಅಕ್ಟೋಬರ್-2024. ಇನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು ತಿಂಗಳಿಗೆ 21,700 ರೂ.ಗಳಿಂದ 69,100 ರೂ.ಗಳ ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ. https://recruitment.itbpolice.nic.in/rect/index.php

error: Content is protected !!
Scroll to Top