ಉಪ್ಪಿನಂಗಡಿ: ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ – ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.17. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅದೇ ದಾರಿಯಿಂದ ಸಾಗುತ್ತಿದ್ದ SYS ನೆಲ್ಯಾಡಿ ಸರ್ಕಲ್ ಅಧ್ಯಕ್ಷರಾದ ಇಸ್ಮಾಯಿಲ್ ಆಶಿಕ್ ತನ್ನ ವಾಹನದಲ್ಲಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಿಂದ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ತರಿಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಸಹಕರಿಸಿದ್ದಾರೆ.

Also Read  ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

error: Content is protected !!
Scroll to Top