ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 3 ಕೊನೆಯ ದಿನ. ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರಿಗೆ ತ್ವರಿತ ಅಂಚೆ (ಸ್ಪೀಡ್‍ಪೋಸ್ಟ್) ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ www.karnatakapost.gov.in ಅಥವಾ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸುವಂತೆ ಮಂಗಳೂರು ವಿಭಾಗದ ಹಿರಿಯ ಅಂಚೆ  ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group