ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್ ಕೆ ಸಿಂಗ್ ಆಯ್ಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕ್ಯಾಬಿನೆಟ್ ನೇಮಕಾತಿ ಸಮಿತಿಯು ಹೊಸ ರಕ್ಷಣಾ ಕಾರ್ಯದರ್ಶಿಯಾಗಿ ಆರ್​ಕೆ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಕೆ. ಶ್ರೀನಿವಾಸ್ ಅವರನ್ನು ವಸತಿ ಮತ್ತು ನಗರ ಕಾರ್ಯದರ್ಶಿಯಾಗಿ, ವಿವೇಕ್ ಜೋಶಿ ಅವರನ್ನು ಸಿಬ್ಬಂದಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಜಾರಿಗೆ ತಂದ ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲ ಶ್ರೀವಾಸ್ತವ ಅವರನ್ನು ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀವಾಸ್ತವ ಅವರು ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರವಾಗಿ, ಆರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ - ತೀವ್ರ ರಕ್ತಸ್ರಾವದಿಂದ ಪತ್ನಿ ಮೃತ್ಯು


 

error: Content is protected !!
Scroll to Top