(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.17. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿಕೆಶಿ ನೇತೃತ್ವದ ಸಚಿವರ ನಿಯೋಗವು ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.