ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಲ್ಲಿಗೆ ಹೋಗುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎನ್ನಲಾಗಿದೆ.

Also Read  "ಅಂತರ ಕಾಯ್ದಿರಿಸಿ- EMI ಬಾಕಿ ಇದೆ"- ಕಾರಿನ ಹಿಂಬದಿ ಬರಹ ವೈರಲ್

           

 

error: Content is protected !!
Scroll to Top