ವಿನೇಶ್ ಫೋಗಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ      ಅದ್ಧೂರಿ ಸ್ವಾಗತ                    

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ದೇಹದ ತೂಕ ಹೆಚ್ಚಳದಿಂದ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ವಿನೇಶ್ ಫೋಗಟ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಜಯ ಘೋಷಣೆ ಕೂಗಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಭಾವುಕರಾದ ವಿನೇಶ್, ದೇಶದ ಜನರಿಂದ ಇಷ್ಟೊಂದು ಪ್ರೀತಿ ಮತ್ತು ಗೌರವ ಸಿಕ್ಕಿರುವುದು ನನ್ನ ಅದೃಷ್ಟ ಎಂದರು.                       

Also Read  ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ.. ➤ 7 ದೋಣಿ ವಶಕ್ಕೆ

error: Content is protected !!