ಮಾಜಿ ಮುಖ್ಯಮಂತ್ರಿ ‘ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥಾನ’ಕ್ಕೆ ಆಗಮನ

(ನ್ಯೂಸ್ ಕಡಬ) newskadaba.c0m ಕೋಟ, ಆ. 19.  ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಕುಟುಂಬ ಸಮೇತ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ದೇವರ ಪ್ರಸಾದ ನೀಡಿ ಅವರನ್ನು ಗೌರವಿಸಿ ಸನ್ಮಾನಿಸಿದರು. ವಿಶ್ರಾಂತ ಆಡಳಿತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ. ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಅರ್ಚಕ ಮಂಡಳಿಯ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

Also Read  ➤ಡಿಕೆ ಶಿವಕುಮಾರ್ ಮಗಳ ಫೀಸ್ ಬಗ್ಗೆ ಮಾಹಿತಿ ಕೇಳಿದ ಸಿಬಿಐ

 

error: Content is protected !!
Scroll to Top