(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯು ಆ. 20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಘನ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
ಆ. 20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
