(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 19. ಮಂಗಳೂರು ಸಂಸದರಾಗಿ ಚುನಾಯಿತರಾದ ಬಳಿಕ ಮೊದಲ ಬಾರಿಗೆ ಅನಂತಾಡಿ ಗ್ರಾಮಕ್ಕೆ ಆಗಮಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ರವರ ಸ್ವಾಗತ ಕಾರ್ಯಕ್ರಮವು ಅನಂತಾಡಿ ಗ್ರಾಮದ ಗೋಳಿಕಟ್ಟೆ ಸರ್ಕಲ್ ನಲ್ಲಿ ನಡೆಯಿತು.
ಪಕ್ಷದ ಪದಾಧಿಕಾರಿಗಳು ಪಕ್ಷದ ಶಾಲು ಹಾಗೂ ಹಾರ ಹಾಕುವ ಮೂಲಕ ಸ್ವಾಗತಿಸಿದರು, ಮಹಿಳೆಯರು ಆರತಿ ಬೆಳಗಿ ತಿಲಕವನ್ನಿಟ್ಟು ಬರಮಾಡಿಕೊಂಡರು.