ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಹೈಕೋರ್ಟ್ ಮೊರೆಹೋದ ಸಿಎಂ ಸಿದ್ದರಾಮಯ್ಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಮನವಿ ಮಾಡಲಾಗಿದೆ.

 

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ದೂರಿನಲ್ಲಿ ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163 ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಆರೋಪಿಸಲಾಗಿದೆ.

 

ಸಿಎಂ ಪರ ವಕೀಲರು ಇಂದೇ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ್ದಾರೆ. ವಕೀಲರ ಮನವಿ ಮಾನ್ಯ ಮಾಡಿದ ಹೈಕೋರ್ಟ್ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಒಪ್ಪಿಗೆ‌ ನೀಡಿದೆ.

error: Content is protected !!

Join the Group

Join WhatsApp Group