ರೂಪೇಶ್ ಶೆಟ್ಟಿ ತುಳು ಚಲನ ಚಿತ್ರ “ಜೈ” ಟೈಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 19.  ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು. ಆದರೆ ಇಂದು ತುಳು ರಂಗಭೂಮಿ ಮತ್ತು ಸಿನಿಮಾರಂಗದಿಂದಾಗಿ ವಿದೇಶಗಳಲ್ಲೂ ತುಳು ಭಾಷೆ ಪ್ರಚಾರವಾಗುತ್ತಿದೆ. ರೂಪೇಶ್ ಶೆಟ್ಟಿ ಅವರಂತಹ ಯುವಕರು ಇಂದು ತುಳು ಭಾಷೆಯ ಬೆಳವಣಿಗೆಗೆ ಶ್ರಮಪಡುತ್ತಿದ್ದಾರೆ ಅವರಿಗೆ ಶುಭಾಶಯಗಳು. ಸಿನಿಮಾ ಒಳ್ಳೆಯ ರೀತಿಯಲ್ಲಿ ಮೂಡಿಬಂದು ಜನರ ಮನ ಗೆಲ್ಲಲಿ“ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

Also Read  ಸತತ ಛಲದಿಂದ ಐಎಎಸ್ ಅಧಿಕಾರಿಯಾದ ರಿಷಿತಾ ಗುಪ್ತಾ

 

error: Content is protected !!
Scroll to Top