ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ – News Kadaba

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು​ ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್​ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸ್ಟೆಲ್​ ಸಿಬ್ಬಂದಿಯ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದ್ದು, ಘಟನಾ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ.

Scroll to Top