ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

 

error: Content is protected !!
Scroll to Top