ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ವತಿಯಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸೆಪ್ಟೆಂಬರ್ 1ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಸಂಬಂಧ ಆಸಕ್ತರು ಅಧಿಕೃತ ವೆಬ್​ಸೈಟ್​ cftri.res.in ಭೇಟಿ ನೀಡಬಹುದು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (CFTRI)
ಹುದ್ದೆ ಹೆಸರು: ರಿಸರ್ಚ್‌ ಅಸೋಸಿಯೇಟ್
ಒಟ್ಟು ಹುದ್ದೆಗಳು: ಒಂದು
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟಂಬರ್ 01
ನೇಮಕಾತಿ ಸ್ಥಳ: ಮೈಸೂರು
ಮಾಸಿಕ ವೇತನ: ರೂ. 50,000

ಅರ್ಜಿ ಸಲ್ಲಿಸಲು ಯಾರು ಅರ್ಹರು?
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರಾಜ್ಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್‌, ಎಂಡಿಎಸ್‌, ಪಿಎಚ್‌.ಡಿ, ಎಂ.ಡಿ, ಎಂವಿಎಸ್ಸಿ, ಎಂ.ಫಾರ್ಮಾ, ಎಂಇ/ಎಂ.ಟೆಕ್ ಪದವಿ ಪಡೆದಿರಬೇಕು.

Also Read  ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

ವಯಸ್ಸಿನಮಿತಿ
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಕೆ ಯ ಕೊನೆಯ ದಿನವಾದ ಸೆಪ್ಟೆಂಬರ್‌ 1ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಗಳು ತಾವು ಮಾಡಿರುವ ಪದವಿ ಆಧಾರದಲ್ಲಿ ತಮ್ಮ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷಗಳ ಅವಧಿಯಲ್ಲಿ ಕೆಲಸದ ಅನುಭವ ಹೊಂದಿರಬೇಕು. ಅಂತವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಅರ್ಭ್ಯರ್ಥಿಗಳ ಆಯ್ಕೆ ಹೇಗೆ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅದರ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆ ಆದವರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಪೋಸ್ಟಿಂಗ್ ಕೊಟ್ಟು, ಮಾಸಿಕವಾಗಿ ರೂಪಾಯಿ 50,000 ನೀಡಲಾಗುತ್ತದೆ ಎಂದು ಸಂಸ್ಥೆಯ ತಿಳಿಸಿದೆ.

Also Read  ಸೀಮೆಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ ► ಬಿಟ್ಟಿ ಸೀಮೆಎಣ್ಣೆಗಾಗಿ ಬಕೆಟ್, ಕ್ಯಾನ್ ಹಿಡಿದು ಮುಗಿ ಬಿದ್ದ ಜನತೆ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಪ್‌ಲೈನ್ ಮೂಲಕ ಅವಕಾಶವಿಲ್ಲ. ಯಾವ ಜಾತಿ ಸಮುದಾಯದ ಅಭ್ಯರ್ಥಿಗಳಿಗೂ ಶುಲ್ಕ ಇರುವುದಿಲ್ಲ. ಸಂಪೂರ್ಣ ಉಚಿತವಾಗಿರಲಿದೆ. ಅರ್ಜಿ ಸಲ್ಲಿಸುವವರು ಈ ಕೆಳಗಿನ ಲಿಂಕ್ https://patcell.cftri.res.in/rec/applicant_register.php ಮೂಲಕ ಅರ್ಜಿ ಸಲ್ಲಿಸಬಹುದು.

error: Content is protected !!
Scroll to Top