(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19. ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ” ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.