(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.