ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.

 

 

 

Scroll to Top