(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 19. ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಹತ್ತು ಸಾವಿರ ಸಾಲದ ಬಡ್ಡಿ ವಿಚಾರವಾಗಿ ಹಲ್ಲೆ ನಡೆದಿದೆ ಎಂಬ ವಿಚಾರ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.