ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಉತ್ತರ ನೀಡಲಾಗಿತ್ತು. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ದೂರುಗಳು ಉದ್ದೇಶಪೂರಿತ. ಶೋಕಾಸ್ ನೋಟಿಸ್ ಗೆ ಕ್ಯಾಬಿನೆಟ್ ಸಲಹೆ ಕೂಡ ಕೊಟ್ಟಿದೆ ಕ್ಯಾಬಿನೆಟ್ ಸಲಹೆ ಪರಿಗಣಿಸದೇ ರಾಜ್ಯಪಾಲರು 100 ಪುಟಗಳ ಕ್ಯಾಬಿನೆಟ್ ಸಲಹೆಗೆ ಎರಡು ಪುಟಗಳ ಉತ್ತರ ಕೊಟ್ಟಿದ್ದಾರೆ ಎಂದು ಅಭಿಷೇಕ್ ಮನುಸಿಂಗ್ವಿ ವಾದಿಸಿದ್ದಾರೆ.

error: Content is protected !!
Scroll to Top