ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟು ಚಲಾವಣೆ ಜಾಲದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿ. ಪ್ರಿಯೇಶ್(38), ವಿನೋದ್ ಕುಮಾರ್.ಕೆ(33), ಅಬ್ದುಲ್ ಖಾದರ್ ಎಸ್.ಎ(58), ಶಿಫಾನ ಮಂಜಿಲ್, ವಡಂಕುಂಕರ, ಕುನಿಯಾ, ಪೆರಿಯಾ, ಆಯೂಬ್ ಖಾನ್, (51), ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ, ಪುತ್ತೂರು, ನಿವಾಸಿಗಳನ್ನು ವಶಕ್ಕೆ ಪಡೆಯಲಾಗಿದೆ.

Also Read  ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ

 

error: Content is protected !!
Scroll to Top