‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ.

ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಕಾಂಗ್ರೆಸ್ ಪಕ್ಷವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಸ್ಫೂರ್ತಿ ಪಡೆದಂತೆ ಭಾಸವಾಗುತ್ತಿದೆ, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬೆಂಬಲ ನೀಡುತ್ತಿರುವುದು ನಮಗೆ ತಿಳಿದಿದೆ ಎಂದರು.

Also Read  ನಾಳೆ ವಿ.ವಿ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

 

error: Content is protected !!
Scroll to Top