ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – News Kadaba

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ – ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ  ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ), ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಆನ್‍ಲೈನ್ ಮೂಲಕ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ: : https://bcwd.karnataka.gov.in. ನೋಡಬಹುದು.
ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಇ-ಮೇಲ್ ವಿಳಾಸ: bcwdhelpline@gmail.com.ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಸಹಾಯವಾಣಿ ದೂರವಾಣಿ ಸಂಖ್ಯೆ 1902 ಹಾಗೂ ಇಮೇಲ್ ವಿಳಾಸ: postmatrichelp@karnataka.gov.in ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Scroll to Top