ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

Crime

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ.

ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರದ ಎರಡು ಕಡೆ ಕರೆದೊಯ್ದು ವಿದ್ಯಾರ್ಥಿಗಳ ಬಟ್ಟೆಬಿಚ್ಚಿ, ಬಸ್ಕಿ ತೆಗೆಸಿ ಕ್ಷಮೆ ಕೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿ ಉಳಿದವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

Scroll to Top