CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಸಮಾವೇಶ -2024ರಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು ಗ್ರಾಮೀಣ ಶಾಲೆಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್‌ ನಿಧಿಯನ್ನು ಶಾಲೆಗಳಿಗೆ ಬಳಸಲು ತೀರ್ಮಾನಿಸಿದ್ದೇವೆ. ಅದರಂತೆ ರಾಜ್ಯದಲ್ಲಿನ ಉದ್ಯಮಿಗಳು ರಾಜ್ಯದಲ್ಲೇ ತಮ್ಮ ಸಿಎಸ್‌ಆರ್‌ ನಿಧಿಯನ್ನು ಬಳಸುವಂತೆ ಜಿಲ್ಲಾಧಿಕಾರಿಗಳು ನಿಗಾ ಇಡಬೇಕು ಎಂದರು.

Also Read  ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ

 

error: Content is protected !!
Scroll to Top