(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಮನೆ ಊಟದ ಭಾಗ್ಯವಿಲ್ಲ. ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಾಗಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಜೈಲು ಅಧಿಕಾರಿಗಳು ಮನೆ ಊಟ ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲರು ಕಾಲಾವಕಾಶ ಕೋರಿ ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 5ಕ್ಕೆ ಮುಂದೂಡಿರುವುದಾಗಿ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ- ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ; ಸೆ. 05ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
