ಕರ್ನಾಟಕ ರಾಜ್ಯ ಸರಕಾರಿ ಹುದ್ದೆ ► ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.23. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

07 ಮೂಲ ವೃಂದದ ಹುದ್ದೆಗಳು ಹಾಗೂ 03 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 10 ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದೆ. ಅರ್ಜಿ ಸಲ್ಲಿಸಲು 2018 ಮಾರ್ಚ್ 20 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ http://kpsc.kar.nic.in ವೆಬ್‌ಸೈಟನ್ನು ಸಂಪರ್ಕಿಸಬಹುದಾಗಿದೆ.

Also Read  ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

error: Content is protected !!
Scroll to Top