HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಣಿ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

 

ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಎಡಿಜಿಪಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್ ಐಟಿ ಅಧಿಕಾರಿಗಳು ನ್ಯಾ. ಸಂತೋಷ್ ಹೆಗಡೆ ವರದಿ ಆಧರಿಸಿ ತನಿಖೆ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಸಿಎಂ ಅಗಿದ್ದ ವೇಳೆ ಬಳ್ಳಾರಿಯಲ್ಲಿ ಸಾಯಿ ಮಿನರಲ್ಸ್ 500 ಎಕರೆ ಭೂಮಿ ಮಂಜೂರು ಮಾಡಲಾಗಿತ್ತು. 2011 ರಲ್ಲೇ ಲೋಕಾಯುಕ್ತ ಸಂತೋಷ್ ಹೆಗಡೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವರದಿ ಪ್ರಕಾರ ಗಣಿ ಗುತ್ತಿಗೆಯಲ್ಲಿ ಅಕ್ರಮ ಆಗಿದೆ ಅಂತ ರಿಪೋರ್ಟ್ ಬಂದಿತ್ತು ಹೀಗಾಗಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತದಿಂದ ಅನುಮತಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group