ಕಡಬ: ಇಂದು ಲೋಕಾಯುಕ್ತ ಪೊಲೀಸರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇಂದು (ಬುಧವಾರ) ಕಡಬ ತಾಲೂಕಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಇಂದು ಆ. 21 (ಬುಧವಾರ) ಬೆಳಿಗ್ಗೆ 11-00 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿರುತ್ತದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

Also Read  ನೂತನ "ಕಡಬ ತಾಲೂಕು ಪಂಚಾಯತ್" ರಚನೆ ✍?ವಿಜಯ ಕುಮಾರ್ ಕಡಬ

ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು

ಪೊಲೀಸ್ ಅಧೀಕ್ಷಕರ ಕಛೇರಿ

0824-2950997

9364062517

ಪೊಲೀಸ್ ಉಪಾಧೀಕ್ಷಕರು-1 ಕಛೇರಿ

0824-2453420

9364062579

ಪೊಲೀಸ್ ಉಪಾಧೀಕ್ಷಕರು-2 ಕಛೇರಿ

0824-2453420

9364062580

Also Read  ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ

ಪೊಲೀಸ್ ನಿರೀಕ್ಷಕರು-1 ಕಛೇರಿ

0824-2427237

9364062691

ಪೊಲೀಸ್ ನಿರೀಕ್ಷಕರು-2 ಕಛೇರಿ

0824-2427237

9364062692

ಪೊಲೀಸ್ ನಿರೀಕ್ಷಕರು-3 ಕಛೇರಿ

0824-2427237

9364062693

ಪೊಲೀಸ್ ನಿರೀಕ್ಷಕರು-4 ಕಛೇರಿ

0824-2427237

9364062694

error: Content is protected !!
Scroll to Top