ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.23. ಮುಂದಿನ ತಿಂಗಳು ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ಸರಕಾರ ನೀಡಿದೆ.

ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Also Read  ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ

error: Content is protected !!