ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ.

ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭಿಸಿಲ್ಲ ಎಂದು ವರದಿ ತಿಳಿಸಿದೆ.

Also Read  ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

 

error: Content is protected !!
Scroll to Top