ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ತರಗತಿಗಳು ಆಗಸ್ಟ್ 12ರಿಂದ ಆರಂಭವಾಗಿದ್ದರೂ ಈವರೆಗೆ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಪಠ್ಯಕ್ರಮಗಳಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಸರಕಾರವು ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಆಗ್ರಹಿಸಿದೆ.

 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ ಬಳ್ಳಡ್ಕ, ಅತಿಥಿ ಉಪನ್ಯಾಸಕರಿಗೆ ಉದ್ಯೋಗವಿಲ್ಲದೇ ಕುಟುಂಬವನ್ನೂ ನಿಭಾಯಿಸಲಾಗದ ಪರಿಸ್ಥಿತಿ ನಿರ್ಮಾ ಣವಾಗಿದೆ. ಹೀಗಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಆಯಾ ಕಾಲೇಜಿನಲ್ಲೇ ಮುಂದುವರಿಸಬೇಕು ಎಂದರು. ಪ್ರಸಕ್ತ ಸಾಲಿನಲ್ಲಿ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದಾಗಿ ಕೆಲವು ವಿಭಾಗಗಳು ಮುಚ್ಚುವ ಪರಿಸ್ಥಿತಿ ಹಂತಕ್ಕೆ ತಲುಪಿದೆ. ಜತೆಗೆ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇದ್ದರೆ ಅಂಥ ವಿಭಾಗಗಳನ್ನು ಸ್ಥಳೀಯ ಕಾಲೇಜುಗಳಿಗೆ ವರ್ಗಾಯಿಸುವಂತೆಯೂ ಸೂಚಿಸಲಾಗಿದೆ.

error: Content is protected !!

Join the Group

Join WhatsApp Group