ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

 

ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Scroll to Top