ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಪತ್ನಿಯ ಸಾವಿಗೆ ಹೆದರಿ ಮೋಹನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

Also Read  ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

error: Content is protected !!
Scroll to Top