ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಸೌಲಭ್ಯ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ.

ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣವನ್ನು ಪಾವತಿಸಲಾಗಿದೆ.

Also Read  ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!!

error: Content is protected !!
Scroll to Top