ರಾಜ್ಯಪಾಲರ ಅವಮಾನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ  ಪ್ರಕರಣ ದಾಖಲೆ..!     ಬಿಜೆಪಿ ಆಗ್ರಹ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರು ಮತ್ತು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಆಗ್ರಹಿಸಿದೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗವು, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ದೂರಿನಲ್ಲಿ ರಾಜ್ಯಪಾಲರಿಗೆ ಬೆದರಿಕೆ ಮತ್ತು ನಿಂದನೆ ಮಾಡಿರುವ ಕಾಂಗ್ರೆಸ್ ಎಂಎಲ್ ಸಿ ಐವನ್ ಡಿಸೋಜಾ, ಸಚಿವರಾದ ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಮನವಿ ಮಾಡಿದ್ದಾರೆ.

Also Read  ಖಾಸಗಿ ಬಸ್ ಗಳ ನಡುವೆ ಅಪಘಾತ...! ಹಲವಾರು ಪ್ರಯಾಣಿಕರಿಗೆ ಗಾಯ

error: Content is protected !!
Scroll to Top