ಆಟೋ ಮೇಲೆ ಉರುಳಿ ಬಿದ್ದ ಮರ   ಚಾಲಕ ಸೇರಿ ಇಬ್ಬರಿಗೆ ಗಾಯ        

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಸದಾಶಿವನಗರ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

ಗಾಯಾಳು ಜೀವ ಎಂ ಅವರು ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಟೋ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Scroll to Top