(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21. ನಗರದ ಐಷಾರಾಮಿ ಪ್ರದೇಶಗಳಲ್ಲಿನ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಇಂದಿರಾನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು ಮುರಳಿ (38), ಸೆಂಥಿಲ್ (50), ಮೂರ್ತಿ (49) ಮತ್ತು ಜಾನ್ (35) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರೂ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯವರಾಗಿದ್ದು, ಕಳ್ಳತನ ಮಾಡಲು ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ.