(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21. ಮಹದೇವಪುರ ವಲಯದ ಕೆರೆ ಕಳಪೆ ನಿರ್ವಹಣೆ ಕುರಿತು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಮಂಗಳವಾರ ಕೆರೆ ಪರಿಶೀಲನೆ ನಡೆಸಿದ್ದು, ಒತ್ತುವರಿ ತೆರವು ಮಾಡಿ ತಿಂಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.