(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. 2024-25ನೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಗಿಡಮೂಲಿಕೆ ಔಷಧಿ ಮತ್ತು ರೋಗ ತಡೆಯುವಿಕೆ ಕುರಿತಾದ ಡಿಪ್ಲೋಮಾ ಕೋರ್ಸ್‍ಗೆ ಮಂಗಳವಾರದಂದು ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಸಂತ ಅಲೋಸಿಯಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್, ಕುಲಸಚಿವರಾದ ಡಾ. ಅಲ್ವಿನ್ ಡೇಸಾ, ಡಾ.ರೊನಾಲ್ಡ್ ನಜರತ್, ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಉಪಸ್ಥಿತರಿದ್ದರು.