ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ – News Kadaba

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಆದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು.

ಲೋಕ ಆದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳು :-

ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು,  ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು,  ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು. ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು. ಅದರಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜಿ ಮಾಡಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುವುದು. ಪಕ್ಷಗಾರರಿಗೆ ಒಪ್ಪಿಗೆಯಾಗುವಂತೆ ವಿವಾದಗಳು ಇತ್ಯರ್ಥವಾಗುವುದರಿಂದ ಇಬ್ಬರ ಸಂಬಂಧವು ಉಳಿದು ಇಬ್ಬರು ಗೆದ್ದ ಮನೋಭಾವದಿಂದ ಸಂತೋಷವಾಗಿರಬಹುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಸದರಿ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಕಕ್ಷಿಗಾರರು ಆನ್‍ಲೈನ್/ ವೀಡಿಯೋ ಕಾನ್ಸರೆನ್ಸ್/ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ರಾಷ್ಟ್ರೀಯ ಲೋಕ್ ಆದಾಲತ್‍ನಲ್ಲಿ ಭಾಗವಹಿಸಿ ವಿವಾದವನ್ನು ಬಗೆಹರಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ದೂರವಾಣಿ ಸಂಖ್ಯೆ: 0824-2448111) ಮತ್ತು ಆಯಾ ತಾಲ್ಲೂಕು ‘ಕಾನೂನು ಸೇವಾ ಸಮಿತಿ, ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top