ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ       ಯೆಲ್ಲೊ ಅಲರ್ಟ್ ಘೋಷಣೆ   

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಅಲ್ಲದೇ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ನೀಡಲಾಗಿದೆ.

Also Read  ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ!

 

error: Content is protected !!
Scroll to Top