ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕೂಡಾ ಕಾರಣವಾಗಿತ್ತು.

Also Read  ಬೀಟ್ ಪೊಲೀಸರಿಂದ ಕಾಲೋನಿಯಲ್ಲಿ ಸಭೆ ➤ ಕುಡಿತದ ಚಟದಿಂದ ದೂರವಿರಿ - ಕೆ. ಚಿನ್ನಪ್ಪ

 

 

error: Content is protected !!
Scroll to Top